Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:3 - ಕನ್ನಡ ಸತ್ಯವೇದವು C.L. Bible (BSI)

3 ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ, ನಾನು ನೆಲಕಚ್ಚುವಂತೆ ಮಾಡಿದ್ದಾನೆ. ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನು ಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:3
14 ತಿಳಿವುಗಳ ಹೋಲಿಕೆ  

ಎಷ್ಟೋ ದಿನಗಳ ಹಿಂದೆ ಸತ್ತವರ ಜೊತೆಯಲ್ಲಿ ನನ್ನನ್ನು ಇರಿಸಿದ್ದಾನೆ ಆ ಕಾರ್ಗತ್ತಲಲ್ಲಿ.


ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II


ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II


ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು.


ಮತ್ತೊಮ್ಮೆ ಅಬ್ನೇರನು, “ನನ್ನನ್ನು ಬಿಟ್ಟುಹೋಗು; ನಿನ್ನನ್ನು ಕೊಲ್ಲಲು ನನ್ನನ್ನೇಕೆ ಒತ್ತಾಯಿಸುವೆ? ಹಾಗೆ ಕೊಂದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ತಾನೆ ಮುಖ ತೋರಿಸಲಿ,” ಎಂದನು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು