Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:6 - ಕನ್ನಡ ಸತ್ಯವೇದವು C.L. Bible (BSI)

6 ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:6
13 ತಿಳಿವುಗಳ ಹೋಲಿಕೆ  

ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು