Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:7 - ಕನ್ನಡ ಸತ್ಯವೇದವು C.L. Bible (BSI)

7 ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:7
20 ತಿಳಿವುಗಳ ಹೋಲಿಕೆ  

ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II


ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು.


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು