Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:9 - ಕನ್ನಡ ಸತ್ಯವೇದವು C.L. Bible (BSI)

9 ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ನಿನ್ನನ್ನೇ ಮರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ; ನಾನು ನಿಮ್ಮಲ್ಲಿ ಅಡಗಿಕೊಳ್ಳುವಂತೆ ನಿಮ್ಮ ಬಳಿಗೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:9
10 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II


ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು