Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:1 - ಕನ್ನಡ ಸತ್ಯವೇದವು C.L. Bible (BSI)

1 ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:1
16 ತಿಳಿವುಗಳ ಹೋಲಿಕೆ  

ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಯುದ್ಧವಿದ್ಯೆಯ ಕಲಿತೆ ಆತನಿಂದಲೆ ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ಆಗ, “ಬಿಲ್ಲನ್ನು ಹಿಡಿದುಕೋ,” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು,


ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II


ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು