ಕೀರ್ತನೆಗಳು 144:14 - ಕನ್ನಡ ಸತ್ಯವೇದವು C.L. Bible (BSI)14 ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. ಅಧ್ಯಾಯವನ್ನು ನೋಡಿ |