Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:2 - ಕನ್ನಡ ಸತ್ಯವೇದವು C.L. Bible (BSI)

2 ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಪ್ರೀತಿಯೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ಆಶ್ರಯವೂ ನನ್ನ ಜನವನ್ನು ನನಗೆ ಅಧೀನಮಾಡಿದವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:2
10 ತಿಳಿವುಗಳ ಹೋಲಿಕೆ  

ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ನನ್ನ ಶಕ್ತಿಯೇ, ನಿನಗಾಗಿ ನಾ ಕಾದಿರುವೆ I ನನ್ನಾಶ್ರಯ ದುರ್ಗ, ದೇವಾ, ನೀನೇ ಅಲ್ಲವೆ II


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು