Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:4 - ಕನ್ನಡ ಸತ್ಯವೇದವು C.L. Bible (BSI)

4 ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ಬರೀ ಉಸಿರೇ; ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮನುಷ್ಯರು ಕೇವಲ ಉಸಿರೇ. ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:4
16 ತಿಳಿವುಗಳ ಹೋಲಿಕೆ  

ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು