Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:1 - ಕನ್ನಡ ಸತ್ಯವೇದವು C.L. Bible (BSI)

1 ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ದೇವರೇ, ಒಡೆಯನೇ, ನಿನ್ನನ್ನು ಘನಪಡಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:1
31 ತಿಳಿವುಗಳ ಹೋಲಿಕೆ  

ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II


ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು