Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:10 - ಕನ್ನಡ ಸತ್ಯವೇದವು C.L. Bible (BSI)

10 ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವದು; ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:10
24 ತಿಳಿವುಗಳ ಹೋಲಿಕೆ  

ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು