Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:13 - ಕನ್ನಡ ಸತ್ಯವೇದವು C.L. Bible (BSI)

13 ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:13
13 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಪ್ರಭುವೇ ಅರಸನು ಸದಾಕಾಲಕು I ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಅಲ್ಲೆಲೂಯ! II


ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!


ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು