Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:15 - ಕನ್ನಡ ಸತ್ಯವೇದವು C.L. Bible (BSI)

15 ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 [ಯೆಹೋವನೇ,] ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ; ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:15
11 ತಿಳಿವುಗಳ ಹೋಲಿಕೆ  

ಸಕಲ ಜೀವಿಗಳಿಗೆ ಆಹಾರ ನೀಡುವಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?


ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!


ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.


ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.


ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II


ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು