Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:17 - ಕನ್ನಡ ಸತ್ಯವೇದವು C.L. Bible (BSI)

17 ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:17
23 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಸಾಧಿಸುವನು ಪ್ರಭು ನ್ಯಾಯನೀತಿಯನು I ದೊರಕಿಸುವನು ಶೋಷಿತರಿಗೆ ನ್ಯಾಯವನು II


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು