Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:18
20 ತಿಳಿವುಗಳ ಹೋಲಿಕೆ  

ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.


ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ?


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು