Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:19 - ಕನ್ನಡ ಸತ್ಯವೇದವು C.L. Bible (BSI)

19 ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:19
18 ತಿಳಿವುಗಳ ಹೋಲಿಕೆ  

ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು