Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:20 - ಕನ್ನಡ ಸತ್ಯವೇದವು C.L. Bible (BSI)

20 ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ; ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೋ ಆತನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:20
14 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು