Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಸರ್ವೋಪಕಾರಿಯು, ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಸರ್ವೋಪಕಾರಿಯೂ ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:9
12 ತಿಳಿವುಗಳ ಹೋಲಿಕೆ  

ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಸತ್ಯಸ್ವರೂಪನು, ದಯಾವಂತನು ಪ್ರಭು I ದಾರಿತಪ್ಪಿದವರಿಗೆ ಬೋಧಕನು ವಿಭು II


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು