Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:1 - ಕನ್ನಡ ಸತ್ಯವೇದವು C.L. Bible (BSI)

1 ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವದು ಒಳ್ಳೇದೂ ಸಂತೋಷಕರವೂ ಆಗಿದೆ; ಆತನನ್ನು ಕೀರ್ತಿಸುವದು ಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:1
10 ತಿಳಿವುಗಳ ಹೋಲಿಕೆ  

ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.


ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು