Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:10 - ಕನ್ನಡ ಸತ್ಯವೇದವು C.L. Bible (BSI)

10 ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ; ಆಳಿನ ತೊಡೆಯ ಬಲವನ್ನು ಮೆಚ್ಚುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:10
11 ತಿಳಿವುಗಳ ಹೋಲಿಕೆ  

ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು