Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:1 - ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯೆಹೋವನಿಗೆ ನೂತನಕೀರ್ತನೆಯನ್ನು ಹಾಡಿರಿ; ಭಕ್ತಸಭೆಯಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:1
15 ತಿಳಿವುಗಳ ಹೋಲಿಕೆ  

ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


“ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ


ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II


ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು