Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:1 - ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:1
13 ತಿಳಿವುಗಳ ಹೋಲಿಕೆ  

ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು I ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು