ಕೀರ್ತನೆಗಳು 150:5 - ಕನ್ನಡ ಸತ್ಯವೇದವು C.L. Bible (BSI)5 ಆತನನ್ನು ಸ್ತುತಿಸಿರಿ ತಾಳದಿಂದ I ಆತನನ್ನು ಸ್ತುತಿಸಿರಿ ಝಲ್ಲರಿಯಿಂದ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.