Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:10 - ಕನ್ನಡ ಸತ್ಯವೇದವು C.L. Bible (BSI)

10 ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:10
23 ತಿಳಿವುಗಳ ಹೋಲಿಕೆ  

ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.


ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಯಾವ ಶವವನ್ನು ಮುಟ್ಟಬಾರದು.


ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.


ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು