Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:2 - ಕನ್ನಡ ಸತ್ಯವೇದವು C.L. Bible (BSI)

2 “ನೀನೇ ನನ್ನೊಡೆಯ"ನೆಂದು ನಾ ನುಡಿದೆ I ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಯೆಹೋವನನ್ನು ಕುರಿತು - ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:2
15 ತಿಳಿವುಗಳ ಹೋಲಿಕೆ  

ನನಗೆ ನೀನಲ್ಲದೆ ಇನ್ನಾರಿಹರು ಪರದಲಿ I ನಿನ್ನ ಹೊರತು ನನಗೇನು ಬೇಕಿಲ್ಲ ಇಹದಲಿ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು