Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:9 - ಕನ್ನಡ ಸತ್ಯವೇದವು C.L. Bible (BSI)

9 ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:9
13 ತಿಳಿವುಗಳ ಹೋಲಿಕೆ  

ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ರಚಿಸುವೆನಿದೋ ಕವನ II


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು