Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:1 - ಕನ್ನಡ ಸತ್ಯವೇದವು C.L. Bible (BSI)

1 ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:1
31 ತಿಳಿವುಗಳ ಹೋಲಿಕೆ  

ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


ದೇವಾ ಆಲಿಸೆನ್ನ ಮೊರೆಯನು I ಕಿವಿಗೊಟ್ಟು ಕೇಳೆನ್ನ ಜಪವನು II


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II


ಆದರೆನ್ನ ಮೊರೆಯು ದೇವನನು ಮುಟ್ಟಿರುವುದು ನಿಜ I ಎನ್ನ ಪ್ರಾರ್ಥನೆಗಾತ ಕಿವಿಗೊಟ್ಟಿರುವುದು ಸಹಜ II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II


ನನ್ನ ಸುತ್ತಲೂ ಶತ್ರುವ್ಯೂಹವಿರುವಲ್ಲಿ I ರಕ್ಷಿಸುವನೆನ್ನನು ನಾ ನಡೆಸುವ ದಾಳಿಯಲಿ II


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II


ಸಂಕಟದಿಂದ ತುಂಬಿದೆ ನನ್ನ ಜೀವನ I ಪಾತಾಳವ ಸಮೀಪಿಸಿದೆ ನನ್ನ ಪ್ರಾಣ II


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು