Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:10 - ಕನ್ನಡ ಸತ್ಯವೇದವು C.L. Bible (BSI)

10 ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ತಮ್ಮ ಹೃದಯವನ್ನು ಬಿಗಿಮಾಡಿದ್ದಾರೆ. ಅಹಂಕಾರದಿಂದ ಮಾತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ತಮ್ಮ ಸೊಕ್ಕಿನ ಹೃದಯಗಳನ್ನು ಮುಚ್ಚಿಕೊಂಡಿದ್ದಾರೆ, ತಮ್ಮ ಬಾಯಿಂದ ಅವರು ಗರ್ವವನ್ನು ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:10
15 ತಿಳಿವುಗಳ ಹೋಲಿಕೆ  

ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ಕೊಬ್ಬೇರಿತ್ತು ಅವನ ಮೋರೆಯಲಿ ಬೊಜ್ಜು ಬೆಳೆದಿತ್ತು ಅವನ ಸೊಂಟದಲಿ.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು