Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:13 - ಕನ್ನಡ ಸತ್ಯವೇದವು C.L. Bible (BSI)

13 ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:13
16 ತಿಳಿವುಗಳ ಹೋಲಿಕೆ  

ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II


ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು