Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:14 - ಕನ್ನಡ ಸತ್ಯವೇದವು C.L. Bible (BSI)

14 ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:14
21 ತಿಳಿವುಗಳ ಹೋಲಿಕೆ  

ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


“ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?


ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು