Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:15 - ಕನ್ನಡ ಸತ್ಯವೇದವು C.L. Bible (BSI)

15 ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:15
23 ತಿಳಿವುಗಳ ಹೋಲಿಕೆ  

ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.


‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು