Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:3 - ಕನ್ನಡ ಸತ್ಯವೇದವು C.L. Bible (BSI)

3 ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:3
32 ತಿಳಿವುಗಳ ಹೋಲಿಕೆ  

ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು