Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:7 - ಕನ್ನಡ ಸತ್ಯವೇದವು C.L. Bible (BSI)

7 ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭುಜಬಲವನ್ನು ಪ್ರಯೋಗಿಸಿ ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಒಡಂಬಡಿಕೆಯ ಪ್ರೀತಿಯ ಅದ್ಭುತವನ್ನು ನನಗೆ ತೋರಿಸಿರಿ. ತಮ್ಮ ವೈರಿಗಳಿಂದ ಓಡಿಬಂದು ನಿಮ್ಮಲ್ಲಿ ಆಶ್ರಯ ಪಡೆಯುವವರಿಗೆ ಭುಜಬಲದಿಂದ ರಕ್ಷಿಸುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:7
18 ತಿಳಿವುಗಳ ಹೋಲಿಕೆ  

ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II


ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು