Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:8 - ಕನ್ನಡ ಸತ್ಯವೇದವು C.L. Bible (BSI)

8-9 ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ ಪ್ರಾಣವೈರಿಗಳಿಂದಲೂ ತಪ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:8
16 ತಿಳಿವುಗಳ ಹೋಲಿಕೆ  

ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು