Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:11 - ಕನ್ನಡ ಸತ್ಯವೇದವು C.L. Bible (BSI)

11 ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:11
8 ತಿಳಿವುಗಳ ಹೋಲಿಕೆ  

ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು