Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:14 - ಕನ್ನಡ ಸತ್ಯವೇದವು C.L. Bible (BSI)

14 ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿಬಿಟ್ಟನು; ಸಿಡಿಲುಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:14
20 ತಿಳಿವುಗಳ ಹೋಲಿಕೆ  

ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಮಳೆಗರಿಯಿತಾ ಮೇಘಮಂಡಲವು I ಭೋರ್ಗರೆಯಿತಾಗ ಅಂತರಿಕ್ಷವು I ಮಿಂಚಿದವು ಎಲ್ಲೆಡೆ ನಿನ್ನಂಬುಗಳು II


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II


ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II


ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು