Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:15 - ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:15
22 ತಿಳಿವುಗಳ ಹೋಲಿಕೆ  

ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II


ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II


ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.


ಆತನಾ ಗದರಿಕೆಗೆ, ಆತನಾ ಶ್ವಾಸಭರಕ್ಕೆ ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ ತೋರಿಬಂದಿತು ಭೂಲೋಕದ ಅಸ್ತಿವಾರ.


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ.


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು