Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:16 - ಕನ್ನಡ ಸತ್ಯವೇದವು C.L. Bible (BSI)

16 ಮೇಲಣಲೋಕದಿಂದ ಹಿಡಿದುಕೊಂಡನು ಕೈಚಾಚಿ I ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:16
10 ತಿಳಿವುಗಳ ಹೋಲಿಕೆ  

ಮೇಲಣಾಲೋಕದಿಂದ ಹಿಡಿದುಕೊಂಡ ಎನ್ನನು ಕೈಚಾಚಿ ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ.


ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ" ಎಂದು ಹೆಸರಿಟ್ಟಳು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು