Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:17 - ಕನ್ನಡ ಸತ್ಯವೇದವು C.L. Bible (BSI)

17 ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:17
16 ತಿಳಿವುಗಳ ಹೋಲಿಕೆ  

ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II


ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ನನ್ನ ಬಿಡಿಸಿ ರಕ್ಷಿಸಿದನು ಶತ್ರುಗಳಿಂದ ನನಗಿಂತ ಪುಷ್ಟ, ಬಲಿಷ್ಠ ಹಗೆಗಳಿಂದ.


ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು