Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:20 - ಕನ್ನಡ ಸತ್ಯವೇದವು C.L. Bible (BSI)

20 ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:20
19 ತಿಳಿವುಗಳ ಹೋಲಿಕೆ  

ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ನಾ ನೀತಿವಂತ, ನಿರಪರಾಧಿಯೆಂದರಿತು I ನನಗಿತ್ತನಾ ಪ್ರಭು ತಕ್ಕ ಪ್ರತಿಫಲವನು II


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು