Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:21 - ಕನ್ನಡ ಸತ್ಯವೇದವು C.L. Bible (BSI)

21 ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:21
13 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II


ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.


ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು