Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:27 - ಕನ್ನಡ ಸತ್ಯವೇದವು C.L. Bible (BSI)

27 ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೀನರನ್ನು ಉದ್ಧರಿಸುವವನೂ ಹವ್ಮಿುನ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೋ ಅವಮಾನ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:27
20 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು