Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:28 - ಕನ್ನಡ ಸತ್ಯವೇದವು C.L. Bible (BSI)

28 ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ, ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:28
15 ತಿಳಿವುಗಳ ಹೋಲಿಕೆ  

ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು