Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:3 - ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನಿಗೆ ಸ್ತೋತ್ರವಾಗಲಿ! ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:3
26 ತಿಳಿವುಗಳ ಹೋಲಿಕೆ  

ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು


ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ಹೇ ದೇವಾ, ನೀ ತೇಜೋಮಯನು I ಸ್ಥಿರಗಿರಿಗಳಿಗಿಂತ ಗಂಭೀರನು II


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II


ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು