Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:30 - ಕನ್ನಡ ಸತ್ಯವೇದವು C.L. Bible (BSI)

30 ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; ಯೆಹೋವನ ಮಾತುಗಳು ಸತ್ಯವಾಗಿವೆ. ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:30
13 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು