Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:34 - ಕನ್ನಡ ಸತ್ಯವೇದವು C.L. Bible (BSI)

34 ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:34
8 ತಿಳಿವುಗಳ ಹೋಲಿಕೆ  

ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


ಸೇನಾಧೀಶ್ವರ ಸರ್ವೇಶ್ವರ ಹೀಗೆಂದರು - “ಇಗೋ, ಏಲಾಮಿನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು.


ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು