Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:35 - ಕನ್ನಡ ಸತ್ಯವೇದವು C.L. Bible (BSI)

35 ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:35
12 ತಿಳಿವುಗಳ ಹೋಲಿಕೆ  

ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ.


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು