Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:41 - ಕನ್ನಡ ಸತ್ಯವೇದವು C.L. Bible (BSI)

41 ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೆಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:41
17 ತಿಳಿವುಗಳ ಹೋಲಿಕೆ  

ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಶತ್ರುರಾಷ್ಟ್ರಗಳೆಲ್ಲಾ ಸುತ್ತುವರಿದಿದ್ದವು ಎನ್ನನು I ಪ್ರಭುವಿನ ನಾಮಬಲದಲಿ ಧ್ವಂಸಮಾಡಿದೆನವುಗಳನು II


ಸುತ್ತಮುತ್ತಲು ಮುತ್ತಿಕೊಂಡಿದ್ದರು ಎನ್ನನು I ಪ್ರಭುವಿನ ನಾಮಬಲದಲಿ ಸಂಹರಿಸಿದೆನವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು