Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:44 - ಕನ್ನಡ ಸತ್ಯವೇದವು C.L. Bible (BSI)

44 ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:44
9 ತಿಳಿವುಗಳ ಹೋಲಿಕೆ  

“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ದಾವೀದನು ವರ್ತಮಾನ ತಂದ ಆ ಯುವಕನನ್ನು, “ನೀನೆಲ್ಲಿಯವನು?” ಎಂದು ಕೇಳಿದ್ದಕ್ಕೆ ಅವನು, “ನಾನು ಇಸ್ರಯೇಲರಲ್ಲಿ ಪ್ರವಾಸಿಯಾಗಿರುವ ಒಬ್ಬ ಅಮಾಲೇಕ್ಯನು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು