Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:46 - ಕನ್ನಡ ಸತ್ಯವೇದವು C.L. Bible (BSI)

46 ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:46
17 ತಿಳಿವುಗಳ ಹೋಲಿಕೆ  

ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು