Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:48 - ಕನ್ನಡ ಸತ್ಯವೇದವು C.L. Bible (BSI)

48 ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ. ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:48
9 ತಿಳಿವುಗಳ ಹೋಲಿಕೆ  

ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II


ಬಿಡಿಸೆನ್ನನು ಪ್ರಭು ಕೆಡುಕರಿಂದ I ಕಾಪಾಡೆನ್ನನು ಹಿಂಸಕರಿಂದ II


ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು